ADVERTISEMENT

Covid-19 India Update: ಮಹಾರಾಷ್ಟ್ರದಲ್ಲಿ ಒಂದೇ ದಿನ 422 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಆಗಸ್ಟ್ 2020, 17:30 IST
Last Updated 18 ಆಗಸ್ಟ್ 2020, 17:30 IST
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ27,62,591 ಆಗಿದೆ. ಈವರೆಗೆ53,005 ಮಂದಿ ಸಾವಿಗೀಡಾಗಿದ್ದು20,34,680 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರ್ಲ್ಡೊಮೀಟರ್ ಅಂಕಿಅಂಶಗಳು ಹೇಳಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 422 ಸಾವು
ಮಹಾರಾಷ್ಟ್ರದಲ್ಲಿ ಮಂಗಳವಾರ ಕೋವಿಡ್-19 ರೋಗದಿಂದ 422 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ ಇಲ್ಲಿ 20,687 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 11,119 ಹೊಸ ಪ್ರಕರಣಗಳು ವರದಿ ಆಗಿದ್ದು ಸೋಂಕಿತರ ಸಂಖ್ಯೆ 6,15,477ಕ್ಕೇರಿದೆ.9,356 ಮಂದಿ ಚೇತರಿಸಿಕೊಂಡಿದ್ದು ಈವರೆಗೆ 4,37,870 ಮಂದಿ ಈವರೆಗೆ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 1,374 ಹೊಸ ಪ್ರಕರಣಗಳು ವರದಿ ಆಗಿದ್ದು ಸೋಂಕಿತರ ಸಂಖ್ಯೆ 1.54ಕ್ಕೇರಿದೆ, ಇವತ್ತು 12 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 4,226 ಆಗಿದೆ.

ADVERTISEMENT

ಗುಜರಾತಿನಲ್ಲಿ 1,126 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕಿತರ ಸಂಖ್ಯೆ 80942ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 20 ಸಾವು ಸಂಭವಿಸಿದ್ದು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 2,822ಕ್ಕೆ ತಲುಪಿದೆ.
ಚಂಡೀಗಡದಲ್ಲಿ 89 ಹೊಸ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 2305ಕ್ಕೇರಿದೆ. ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 53,860 ಆಗಿದ್ದುಈವರೆಗೆ 121 ಮಂದಿ ಸಾವಿಗೀಡಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಂದೇ ದಿನ 77 ಮಂದಿ ಸಾವಿಗೀಡಾಗಿದ್ದಾರೆ. 4,336 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 1,62,434ಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.