ADVERTISEMENT

Covid-19 India Update: 24 ಗಂಟೆಗಳಲ್ಲಿ 57,982 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಆಗಸ್ಟ್ 2020, 4:44 IST
Last Updated 17 ಆಗಸ್ಟ್ 2020, 4:44 IST
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 57,982 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಇದೇ ಅವಧಿಯಲ್ಲಿ 941 ಮಂದಿ ಸೋಂಕಿನಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಒಟ್ಟು 26,47,664 ಕೊರೊನಾ ವೈರಸ್‌ ಸೋಂಕಿತರ ಪೈಕಿ ಈವರೆಗೂ 19,19,843 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಹಾಗೂ 50,921 ಮಂದಿ ಸಾವಿಗೀಡಾಗಿದ್ದಾರೆ. ಭಾರತದಲ್ಲಿ ಪ್ರಸ್ತುತ 6,76,900 ಸಕ್ರಿಯ ಪ್ರಕರಣಗಳಿವೆ.

ಭಾನುವಾರ 7,31,697 ಗಂಟಲು ಮಾದರಿಗಳ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 3,00,41,400 ಮಾದರಿಗಳ ಪರೀಕ್ಷೆಗಳನ್ನು ಪೂರೈಸಿರುವುದಾಗಿ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ 1,58,705 ಸಕ್ರಿಯ ಪ್ರಕರಣಗಳಿದ್ದು, 4,17,123 ಮಂದಿ ಗುಣಮುಖರಾಗಿದ್ದಾರೆ ಹಾಗೂ 20,037 ಮಂದಿ ಸಾವಿಗೀಡಾಗಿದ್ದಾರೆ. ರಾಜಧಾನಿ ದೆಹಲಿಯಲ್ಲಿ 10,823 ಸಕ್ರಿಯ ಪ್ರಕರಣಗಳಿದ್ದು, 1,37,561 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 4,196 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 54,019 ಸಕ್ರಿಯ ಪ್ರಕರಣಗಳಿದ್ದು, 2,78,270 ಮಂದಿ ಗುಣಮುಖರಾಗಿದ್ದಾರೆ ಹಾಗೂ 5,766 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 81,528 ಸಕ್ರಿಯ ಪ್ರಕರಣಗಳಿವೆ ಹಾಗೂ 1,41,491 ಮಂದಿ ಗುಣಮುಖರಾಗಿದ್ದಾರೆ. 3,947 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.