ADVERTISEMENT

Covid-19 India Update | ದೇಶದಲ್ಲಿ 36 ಲಕ್ಷ ದಾಟಿದ ಒಟ್ಟು ಕೋವಿಡ್‌ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಆಗಸ್ಟ್ 2020, 4:44 IST
Last Updated 31 ಆಗಸ್ಟ್ 2020, 4:44 IST
ಕೋವಿಡ್‌–19 ಪರೀಕ್ಷೆ–‍ಪ್ರಾತಿನಿಧಿಕ ಚಿತ್ರ
ಕೋವಿಡ್‌–19 ಪರೀಕ್ಷೆ–‍ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 78,512 ಹೊಸ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ 971 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಈವರಿನ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 36,21,246 ಮುಟ್ಟಿದೆ. ಈವರೆಗೂ 64,469 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 27,74,802 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 7,81,975 ಸಕ್ರಿಯ ಪ್ರಕರಣಗಳು ಇರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಆಗಸ್ಟ್‌ 30ರ ವರೆಗೂ ದೇಶದಲ್ಲಿ 4,23,07,914 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಭಾನುವಾರ ಒಂದೇ ದಿನ 8,46,278 ಮಾದರಿಗಳ ಕೋವಿಡ್‌ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್‌ ಮಾಹಿತಿ ನೀಡಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 1,93,889 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 5,62,401 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ 24,399 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ 1,93,889 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 5,62,401 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ 24,399 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 88,110 ಸಕ್ರಿಯ ಪ್ರಕರಣಗಳಿಗೆ ಹಾಗೂ 2,42,229 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ 5,589 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.