ADVERTISEMENT

Covid-19 India Update: ಕಳೆದ 24 ಗಂಟೆಗಳಲ್ಲಿ 43,082 ಹೊಸ ಪ್ರಕರಣಗಳು

ಏಜೆನ್ಸೀಸ್
Published 27 ನವೆಂಬರ್ 2020, 5:05 IST
Last Updated 27 ನವೆಂಬರ್ 2020, 5:05 IST
ಮುಂಬೈ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ದೇಹದ ಉಷ್ಣಾಂಶ ಪರೀಕ್ಷೆ ನಡೆಸುತ್ತಿರುವುದು
ಮುಂಬೈ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ದೇಹದ ಉಷ್ಣಾಂಶ ಪರೀಕ್ಷೆ ನಡೆಸುತ್ತಿರುವುದು   

ನವದೆಹಲಿ: ಶುಕ್ರವಾರ ಬೆಳಗ್ಗಿನ ವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 43,082 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 93,09,788ಕ್ಕೆ ಏರಿಕೆಯಾಗಿದೆ.

ಒಟ್ಟು ಪ್ರಕರಣಗಳ ಪೈಕಿ 87,18,517 ಮಂದಿ ಗುಣಮುಖರಾಗಿದ್ದಾರೆ ಹಾಗೂ ಈವರೆಗೂ 1,35,715 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 4,55,555 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 39,379 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಹಾಗೂ ಇದೇ ಅವಧಿಯಲ್ಲಿ 492 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಿಂದ ತಿಳಿದು ಬಂದಿದೆ.

ಐಸಿಎಂಆರ್‌ ಪ್ರಕಾರ, ದೇಶದಲ್ಲಿ ಒಟ್ಟು 13,70,62,749 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ –19 ಪರೀಕ್ಷೆ ಮಾಡಲಾಗಿದೆ. ಗುರುವಾರ ಒಂದೇ ದಿನ 11,31,204 ಮಾದರಿಗಳಿಗೆ ಪರೀಕ್ಷೆ ನಡೆಸಲಾಗಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 87,014 ಸಕ್ರಿಯ ಪ್ರಕರಣಗಳು, ಕೇರಳದಲ್ಲಿ 64,615, ದೆಹಲಿಯಲ್ಲಿ 38,734 ಹಾಗೂ ಪಶ್ಚಿಮ ಬಂಗಾಳದಲ್ಲಿ 24,670 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.