ADVERTISEMENT

Covid-19 India Update: 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ ಪ್ರಕರಣಗಳು 37,148

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2020, 4:15 IST
Last Updated 21 ಜುಲೈ 2020, 4:15 IST
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 37,148 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ ದೇಶದಾದ್ಯಂತ 587 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಸ್ತುತ ದೇಶದಲ್ಲಿ 4,02,529 ಸಕ್ರಿಯ ಪ್ರಕರಣಗಳಿದ್ದು, 7,24,578 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 11,55,191 ಕೋವಿಡ್‌ ಪ್ರಕರಣಗಳು ದಾಖಲಾಗಿವೆ ಹಾಗೂ 28,084 ಮಂದಿ ಸೋಂಕಿನ ಕಾರಣಗಳಿಂದ ಮೃತಪಟ್ಟಿದ್ದಾರೆ.

ಜುಲೈ 20ರ ವರೆಗೂ 1,43,81,303 ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್‌ ಹೇಳಿದೆ. ಭಾನುವಾರ ಒಂದೇ ದಿನ 3,33,395 ಮಾದರಿಗಳ ಪರೀಕ್ಷೆ ನಡೆದಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 1,31,636 ಸಕ್ರಿಯ ಪ್ರಕರಣಗಳಿದ್ದು, 1,75,029 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 3,18,695 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 12,030 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ದೆಹಲಿಯಲ್ಲಿ 15,166 ಸಕ್ರಿಯ ಪ್ರಕರಣಗಳಿದ್ದು, 1,04,918 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,23,747 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 3,663 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.