ADVERTISEMENT

Covid-19 India Update: ದೇಶದಲ್ಲಿ 6,86,395 ಸಕ್ರಿಯ ಪ್ರಕರಣಗಳು

20,96,665 ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಆಗಸ್ಟ್ 2020, 4:29 IST
Last Updated 20 ಆಗಸ್ಟ್ 2020, 4:29 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ   

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 69,652 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಇದೇ ಅವಧಿಯಲ್ಲಿ 977 ಮಂದಿ ಸೋಂಕಿನಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಮೂಲಕ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,86,395ಕ್ಕೆ ಏರಿಕೆಯಾಗಿದೆ.

ಒಟ್ಟು 28,36,926 ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಪೈಕಿ ಈವರೆಗೂ 20,96,665 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಹಾಗೂ 53,866 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಬುಧವಾರ 9,18,470 ಗಂಟಲು ಮಾದರಿಗಳ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 3,26,61,252 ಮಾದರಿಗಳ ಪರೀಕ್ಷೆಗಳನ್ನು ಪೂರೈಸಿರುವುದಾಗಿ ಐಸಿಎಂಆರ್‌ ತಿಳಿಸಿದೆ.

ರಾಜಧಾನಿ ದೆಹಲಿಯಲ್ಲಿ 11,137 ಸಕ್ರಿಯ ಪ್ರಕರಣಗಳಿದ್ದು, 1,40,767 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 4,235 ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 1,60,728 ಸಕ್ರಿಯ ಪ್ರಕರಣಗಳಿದ್ದು, 4,46,881 ಮಂದಿ ಗುಣಮುಖರಾಗಿದ್ದಾರೆ ಹಾಗೂ 21,033 ಮಂದಿ ಸಾವಿಗೀಡಾಗಿದ್ದಾರೆ.

ತಮಿಳುನಾಡಿನಲ್ಲಿ 53,155 ಸಕ್ರಿಯ ಪ್ರಕರಣಗಳಿದ್ದು, 2,96,171 ಮಂದಿ ಗುಣಮುಖರಾಗಿದ್ದಾರೆ ಹಾಗೂ 6,123 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 81,113 ಸಕ್ರಿಯ ಪ್ರಕರಣಗಳಿವೆ ಹಾಗೂ 1,64,150 ಮಂದಿ ಗುಣಮುಖರಾಗಿದ್ದಾರೆ. 4,327 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.