ADVERTISEMENT

ಆಮ್ಲಜನಕ ಉತ್ಪಾದನೆ: 30 ಕೈಗಾರಿಕೆಗಳನ್ನು ಗುರುತಿಸಿದ ಸಿಪಿಸಿಬಿ

ಪಿಟಿಐ
Published 1 ಮೇ 2021, 21:24 IST
Last Updated 1 ಮೇ 2021, 21:24 IST
   

ನವದೆಹಲಿ: ದೇಶದಲ್ಲಿ ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ವೈದ್ಯಕೀಯ ಉದ್ದೇಶದ ಆಮ್ಲಜನಕವನ್ನು ಉತ್ಪಾದಿಸಲು ಸುಮಾರು 30 ಕೈಗಾರಿಕೆಗಳನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (ಸಿಪಿಸಿಬಿ) ಗುರುತಿಸಿದೆ.

ನೈಟ್ರೋಜನ್‌ ಉತ್ಪಾದಿಸುವ ಘಟಕಗಳನ್ನು ವೈದ್ಯಕೀಯ ಉದ್ದೇಶದ ಆಮ್ಲಜನಕ ಉತ್ಪಾದನೆಗೆ ಬಳಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳ ಸಹಯೋಗದಲ್ಲಿ ಕೈಗಾರಿಕೆಗಳನ್ನು ಗುರುತಿಸಲಾಗಿದೆ ಎಂದು ಸಿಪಿಸಿಬಿ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT