ADVERTISEMENT

ಕೇರಳ: ಸಿ.ಎಂ ಕ್ಷೇತ್ರದಲ್ಲಿ ಸಿಪಿಐ, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಪಿಟಿಐ
Published 14 ಸೆಪ್ಟೆಂಬರ್ 2021, 7:20 IST
Last Updated 14 ಸೆಪ್ಟೆಂಬರ್ 2021, 7:20 IST
ಪಿಣರಾಯಿ ವಿಜಯನ್‌
ಪಿಣರಾಯಿ ವಿಜಯನ್‌    

ಕಣ್ಣೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಪ್ರತಿನಿಧಿಸುವ ಧರ್ಮದೋಮ್‌ ಕ್ಷೇತ್ರದ ಮೇಲೂರು ಗ್ರಾಮದಲ್ಲಿ ಸಿಪಿಐ (ಎಂ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಸೋಮವಾರ ತಡರಾತ್ರಿ ಗಲಾಟೆ ನಡೆದಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತ ಧನರಾಜ್‌ ಅವರ ಕೈ ಮತ್ತು ಎದೆಯ ಭಾಗಕ್ಕೆ ಗಂಭೀರವಾದ ಗಾಯಗಳಾಗಿದ್ದು, ಕೋಯಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಸಿಪಿಐ (ಎಂ) ಕಾರ್ಯಕರ್ತ ಮನೀಶ್‌ ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಸದ್ಯ ಘಟನಾ ಸ್ಥಳದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.