ADVERTISEMENT

ಸಿಪಿಐ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರವರಂ ಸುಧಾಕರ್‌ ರೆಡ್ಡಿ ನಿಧನ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 14:32 IST
Last Updated 23 ಆಗಸ್ಟ್ 2025, 14:32 IST
ಸುರವರಂ ಸುಧಾಕರ್‌ ರೆಡ್ಡಿ
ಸುರವರಂ ಸುಧಾಕರ್‌ ರೆಡ್ಡಿ   

ಹೈದರಾಬಾದ್‌: ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಸಿಪಿಐ) ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರವರಂ ಸುಧಾಕರ್‌ ರೆಡ್ಡಿ (83) ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ.

ಮಕ್ದೂಮ್‌ ಭವನದ ಸಿಪಿಐ ರಾಜ್ಯ ಕಚೇರಿಯಲ್ಲಿ ಭಾನುವಾರ ಅಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಮೃತದೇಹವನ್ನು ಅವರ ಇಚ್ಛೆಯಂತೆ ಗಾಂಧಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗುತ್ತದೆ. ಅವರ ಕಣ್ಣುಗಳನ್ನು ಎಲ್‌ವಿ ಪ್ರಸಾದ್‌ ಕಣ್ಣಿನ ಆಸ್ಪತ್ರೆಗೆ ದಾನ ಮಾಡಲಾಗಿದೆ.

ಸುಧಾಕರ್‌ ರೆಡ್ಡಿ ಅವರು ನಲ್ಗೊಂಡ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.