ADVERTISEMENT

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಸೂಪರ್‌ ನ್ಯೂಮರಿ ಸೀಟು ಕಲ್ಪಿಸಿ: ಯುಜಿಸಿ

ಪಿಟಿಐ
Published 30 ಮಾರ್ಚ್ 2022, 18:25 IST
Last Updated 30 ಮಾರ್ಚ್ 2022, 18:25 IST
   

ನವದೆಹಲಿ: ಕೋವಿಡ್‌–19ರ ಕಾರಣದಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ವಿದ್ಯಾರ್ಥಿಗಳಿಗೆ ಎಲ್ಲ ವಿಶ್ವವಿದ್ಯಾಲಯಗಳು ಸೂಪರ್‌ನ್ಯೂಮರಿ ಸೀಟುಗಳನ್ನು ಸೃಷ್ಟಿಸಬೇಕು ಎಂದುವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸೂಚಿಸಿದೆ.

ಈ ಕುರಿತುದೇಶದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಪತ್ರ ಬರೆದಿರುವ ಯುಜಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳನ್ನು ಗುರುತಿಸುತ್ತದೆ. ಅವರ ಉನ್ನತ ಶಿಕ್ಷಣಕ್ಕೆ ವಿ.ವಿಗಳು ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT