ADVERTISEMENT

ಆನ್‌ಲೈನ್‌ ಬೆಟ್ಟಿಂಗ್‌: ED ವಿಚಾರಣೆಗೆ ಹಾಜರಾದ ಕ್ರಿಕೆಟಿಗ ರಾಬಿನ್‌ ಉತ್ತಪ್ಪ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 7:34 IST
Last Updated 22 ಸೆಪ್ಟೆಂಬರ್ 2025, 7:34 IST
<div class="paragraphs"><p>ರಾಬಿನ್‌ ಉತ್ತಪ್ಪ</p></div>

ರಾಬಿನ್‌ ಉತ್ತಪ್ಪ

   

ನವದೆಹಲಿ: ಕಾನೂನುಬಾಹಿರ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ಹಾಗೂ ಜೂಜಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಸೋಮವಾರ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣ ಸಂಬಂಧ ರಾಬಿನ್‌ ಉತ್ತಪ್ಪ ಅವರು ತಮ್ಮ ವಕೀಲರೊಂದಿಗೆ ದೆಹಲಿಯ ಇ.ಡಿ ಕೇಂದ್ರ ಕಚೇರಿಗೆ ಬಂದಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಇ.ಡಿ ಅಧಿಕಾರಿಗಳು ಕ್ರಿಕೆಟಿಗ ಯುವರಾಜ್‌ ಸಿಂಗ್‌ ಹಾಗೂ ನಟ ಸೋನು ಸೂದ್‌ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದಾರೆ.

1xಬೆಟ್‌ ಆ್ಯಪ್‌ಗೆ ಸಂಬಂಧಿಸಿದಂತೆ ದೆಹಲಿಯ ಇ.ಡಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ (ಸೆ. 23ರಂದು) ಯುವರಾಜ್‌ ಸಿಂಗ್‌, 24ರಂದು ಸೋನು ಸೂದ್‌ ಅವರ ವಿಚಾರಣೆ ನಡೆಸಲಾಗುತ್ತದೆ ಎಂದು ಇ.ಡಿ ಮೂಲಗಳು ತಿಳಿಸಿವೆ.

ಇದೇ ಪ್ರಕರಣ ಸಂಬಂಧ ಇ.ಡಿ.ಯು ಈಗಾಗಲೇ ಕ್ರಿಕೆಟಿಗರಾದ ಸುರೇಶ್‌ ರೈನಾ, ಶಿಖರ್‌ ಧವನ್‌, ಟಿಎಂಸಿ ಮಾಜಿ ಸಂಸದೆ ಮಿಮಿ ಚಕ್ರವರ್ತಿ, ಬಂಗಾಳಿ ನಟ ಅಂಕುಶ್‌ ಹಜ್ರಾ ಅವರ ವಿಚಾರಣೆ ನಡೆಸಿದೆ. ಆದರೆ, ನಟಿ ಊರ್ವಶಿ ರೌಟೇಲ ವಿಚಾರಣೆಗೆ ಇನ್ನೂ ಹಾಜರಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.