ADVERTISEMENT

ಖೇಮ್ಕಾ ಹತ್ಯೆ: ಬಿಹಾರ ಭಾರತದ ಅಪರಾಧ ರಾಜಧಾನಿ ಎಂದು ಸಾಬೀತಾಗಿದೆ; ರಾಹುಲ್

ಪಿಟಿಐ
Published 6 ಜುಲೈ 2025, 5:35 IST
Last Updated 6 ಜುಲೈ 2025, 5:35 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

ಪಿಟಿಐ ಚಿತ್ರ

ನವದೆಹಲಿ: ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರವನ್ನು ಭಾರತದ ಅಪರಾಧ ರಾಜಧಾನಿಯನ್ನಾಗಿ ಮಾಡಿದ್ದಾರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾನುವಾರ ಆರೋಪ ಮಾಡಿದ್ದಾರೆ.

ADVERTISEMENT

ಬಿಹಾರವನ್ನು ಭಾರತದ ಅಪರಾಧ ರಾಜಧಾನಿಯನ್ನಾಗಿ ಮಾಡಿರುವುದಕ್ಕೆ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ರಾಹುಲ್‌ ಗಂಭೀರ ಆರೋಪ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಗೋಪಾಲ್ ಖೇಮ್ಕಾರನ್ನು ಅವರ ನಿವಾಸದ ಮುಂದೆ ಹತ್ಯೆ ಮಾಡಲಾಗಿತ್ತು.

ಮುಂಬರುವ ವಿಧಾನಸಭಾ ಚುನಾವಣೆಯು ಕೇವಲ ಸರ್ಕಾರವನ್ನು ಬದಲಾಯಿಸುವುದಿಲ್ಲ, ರಾಜ್ಯವನ್ನು ಉಳಿಸುತ್ತದೆ ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ. 

ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. 

ಬಿಹಾರದ ಜನರು ಪ್ರಸ್ತುತ ಲೂಟಿ, ಗುಂಡಿನ ದಾಳಿ ಮತ್ತು ಕೊಲೆಯ ನೆರಳಿನಲ್ಲಿ ಬದುಕುತ್ತಿದ್ದಾರೆ. ಅಪರಾಧ ಇಲ್ಲಿ ಸಾಮಾನ್ಯವಾಗಿದೆ, ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ರಾಹುಲ್‌ ಆರೋಪಿಸಿದ್ದಾರೆ.

ಸಹೋದರ ಸಹೋದರಿಯರೇ, ಈ ಅನ್ಯಾಯವನ್ನು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ, ನಿಮ್ಮ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗದ ಸರ್ಕಾರ ಭವಿಷ್ಯದ ಜವಾಬ್ದಾರಿಯನ್ನು ಸಹ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.