ADVERTISEMENT

ಪಟ್ನಾದಲ್ಲಿ ಗಾಯಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ಐಎಎನ್ಎಸ್
Published 8 ಮೇ 2022, 3:16 IST
Last Updated 8 ಮೇ 2022, 3:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಟ್ನಾ: ಬಿಹಾರ ರಾಜಧಾನಿಯ ಕೃಷ್ಣನಗರ ಪ್ರದೇಶದಲ್ಲಿ 28 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯು ಜಹಾನಾಬಾದ್ ಜಿಲ್ಲೆಯ ನಿವಾಸಿಯಾಗಿದ್ದು, ಮದುವೆ, ಜನ್ಮದಿನಾಚರಣೆ ಸೇರಿದಂತೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಗಾಯನ ಗೋಷ್ಠಿಗಳನ್ನು ನಡೆಸಿಕೊಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಆರೋಪಿಗಳಾದ ಪಿಂಟು ಕುಮಾರ್, ಸಂಜೀವ್ ಕುಮಾರ್ ಹಾಗೂ ಕರು ಕುಮಾರ್ ಮದುವೆ ಸಮಾರಂಭದಲ್ಲಿ ಕಾರ್ಯಕ್ರಮ ನಡೆಸಿಕೊಡುವಂತೆ ಕೇಳಿಕೊಂಡಿದ್ದರು ಎಂದು ಗಾಯಕಿ ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

‘ಆರೋಪಿಗಳ ಕೋರಿಕೆಯಂತೆ ಕಾರ್ಯಕ್ರಮ ನಡೆಸಿಕೊಡಲು ಅವರು ಹೇಳಿದ ಸ್ಥಳಕ್ಕೆ ತೆರಳಿದಾಗ ಆಘಾತವಾಯಿತು. ಅಲ್ಲಿ ಅಂಥ ಯಾವುದೇ ಸಮಾರಂಭ ಇರಲಿಲ್ಲ. ಈ ಕುರಿತು ವಿಚಾರಿಸಿದಾಗ ನನ್ನನ್ನು ಕೊಠಡಿಯೊಂದಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಇದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ’ ಎಂದು ಸಂತ್ರಸ್ತೆ ಹೇಳಿದ್ದಾರೆ.

‘ಹೇಗೋ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಮತ್ತೊಂದು ಕೊಠಡಿಗೆ ತೆರಳಿ ಲಾಕ್ ಮಾಡಿಕೊಂಡೆ. ಕೂಡಲೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದೆ’ ಎಂದು ಅವರು ಉಲ್ಲೇಖಿಸಿದ್ದಾರೆ.

‘ನಾವು ತಕ್ಷಣವೇ ಸ್ಥಳಕ್ಕೆ ತೆರಳಿ ಸಂತ್ರಸ್ತೆಯನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದೇವೆ’ ಎಂದು ಕೃಷ್ಣನಗರ ಪೊಲೀಸ್ ಠಾಣಾಧಿಕಾರಿ ರವಿ ರಂಜನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.