ADVERTISEMENT

ಸಲ್ಮಾನ್ ಖಾನ್‌ಗೆ ಸಮನ್ಸ್‌: ಜೂ.13ರವರೆಗೆ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಪಿಟಿಐ
Published 5 ಮೇ 2022, 14:54 IST
Last Updated 5 ಮೇ 2022, 14:54 IST
ಸಲ್ಮಾನ್ ಖಾನ್‌
ಸಲ್ಮಾನ್ ಖಾನ್‌   

ಮುಂಬೈ: 2019ರಲ್ಲಿ ಪತ್ರಕರ್ತರೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್‌ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೆಳ ನ್ಯಾಯಾಲಯವು ಜಾರಿ ಮಾಡಿದ್ದ ಸಮನ್ಸ್‌ಗೆ ನೀಡಿರುವ ತಡೆಯಾಜ್ಞೆಯನ್ನು ಬಾಂಬೆ ಹೈಕೋರ್ಟ್‌ ಜೂನ್ 13ರ ವರೆಗೆ ವಿಸ್ತರಿಸಿದೆ.

ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸಲ್ಮಾನ್‌ ಖಾನ್‌ ಮತ್ತು ಅವರ ಅಂಗರಕ್ಷಕ ನವಾಜ್‌ ಶೇಖ್‌ ವಿರುದ್ಧ ಸಮನ್ಸ್ ಜಾರಿ ಮಾಡಿ ಏಪ್ರಿಲ್ 5ರೊಳಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು.

ಇದಕ್ಕೆ ತಡೆಯಾಜ್ಞೆ ಕೋರಿ ಸಲ್ಮಾನ್‌ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್‌ ಮೇ 25ರ ವರೆಗೆ ತಡಯಾಜ್ಞೆ ನೀಡಿತ್ತು. ಬಳಿಕ ನವಾಜ್‌ ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಜೆ. ಜಮಾದಾರ್‌ ನೇತೃತ್ವದ ನ್ಯಾಯಪೀಠವು ತಡೆಯಾಜ್ಞೆಯನ್ನು ವಿಸ್ತರಿಸಿದೆ.

ADVERTISEMENT

ತನ್ನ ಮೇಲೆ ಹಲ್ಲೆ ನಡೆಸಿ, ಬೆದರಿಕೆಯೊಡ್ಡಲಾಗಿದೆ ಎಂದು ಆರೋಪಿಸಿ ಪತ್ರಕರ್ತ ಅಶೋಕ್‌ ಪಾಂಡೆ ಅವರು ಸಲ್ಮಾನ್‌ ಖಾನ್‌ ಮತ್ತು ನವಾಜ್‌ ವಿರುದ್ಧ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.