ADVERTISEMENT

ಕ್ರಿಮಿನಲ್ ನ್ಯಾಯಾಂಗವ್ಯವಸ್ಥೆಯೇ ಒಂದು ಶಿಕ್ಷೆ: ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 19:33 IST
Last Updated 29 ನವೆಂಬರ್ 2022, 19:33 IST
   

ನವದೆಹಲಿ: ನಮ್ಮ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯೇ ಒಂದು ಶಿಕ್ಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಆತ್ಮಹತ್ಯೆಗೆ ಕುಮ್ಮಕ್ಕು ಸಂಬಂಧ 2008ರಲ್ಲಿ ಪಂಜಾಬ್‌ನಲ್ಲಿ ದಾಖಲಾಗಿದ್ದ ಪ್ರಕರಣದಿಂದ ಮೂವರನ್ನು ಕೈಬಿಟ್ಟಿತು.

ಪ್ರಕರಣದಲ್ಲಿ ಕೆಳಹಂತದ ಕೋರ್ಟ್‌ ಆದೇಶ ಪ್ರಶ್ನಿಸಿ ಮೂವರು ಪಂಜಾಬ್–ಹರಿಯಾಣ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ 13 ವರ್ಷ ದಿಂದ ಬಾಕಿ ಉಳಿದಿತ್ತು. ಇದರ ವಿಚಾರಣೆ ವೇಳೆ ನ್ಯಾಯಮೂರ್ತಿ
ಗಳಾದ ಎಸ್‌.ಕೆ.ಕೌಲ್‌. ಎ.ಎಸ್.ಒಕಾ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT