ಮೊಸಳೆಗಳು
Credit: iStock Photo
ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಿಜೆಪಿ ಮಾಜಿ ಕಾರ್ಪೊರೇಟರ್‌ರೊಬ್ಬರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳೆ ನಡೆಸಿದ್ದ ವೇಳೆ ನಾಲ್ಕು ಮೊಸಳೆಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
‘ಬೀಡಿ ತಯಾರಿಕೆ, ಕಟ್ಟಡ ನಿರ್ಮಾಣ ಗುತ್ತಿಗೆದಾರರು ಆಗಿರುವ ಬಿಜೆಪಿಯ ಮಾಜಿ ಕಾರ್ಪೋರೇಟರ್ ರಾಜೇಶ್ ಕೇಸರವಾಣಿ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಮೊಸಳೆಗಳು ಪತ್ತೆಯಾಗಿವೆ. ಈ ಕುರಿತು ರಾಜೇಶ್ ಯಾವುದೇ ಮಾಹಿತಿಯನ್ನು ಬಾಯ್ಬಿಟ್ಟಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಮೊಸಳೆಗಳು ಇರುವ ಬಗ್ಗೆ ಐಟಿ ಅಧಿಕಾರಿಗಳು ಮಾಹಿತಿ ನೀಡಿದ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿ ಮೊಸಳೆಗಳನ್ನು ರಕ್ಷಣೆ ಮಾಡಲಾಗಿದೆ. ಜತೆಗೆ, ರಾಜೇಶ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಅರಣ್ಯ ಇಲಾಖೆ ಅಧಿಕಾರಿ ಅಸೀಮ್ ಶ್ರೀವಾಸ್ತವ ತಿಳಿಸಿದ್ದಾರೆ.
ಸದ್ಯ ಮೊಸಳೆಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಶ್ರೀವಾಸ್ತವ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.