ನವದೆಹಲಿ: ಕೇಂದ್ರ ಗುಪ್ತಚರದಳದ ನಿರ್ದೇಶಕರ ಮನೆ ಕಾವಲಿಗೆ ನಿಯೋಜನೆಯಾಗಿದ್ದ 53 ವರ್ಷದ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಅಸಿಸ್ಟಂಟ್ ಸಬ್ ಇನ್‌ಸ್ಟೆಕ್ಟರ್ (ASI) ಒಬ್ಬರು ತಮ್ಮ ರೈಫಲ್‌ನಿಂದ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೃತ ಕಾನ್ಸ್‌ಟೇಬಲ್ ಅನ್ನು ರಾಜಬೀರ್ ಸಿಂಗ್ ಎಂದು ಗುರುತಿಸಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇತ್ತೀಚೆಗಷ್ಟೇ ರಾಜಬೀರ್ ಸಿಂಗ್ ಅವರನ್ನು ಕೇಂದ್ರ ಗುಪ್ತಚರದಳದ ನಿರ್ದೇಶಕರ ಮನೆ ಕಾವಲಿಗೆ ನಿಯೋಜಿಸಲಾಗಿತ್ತು. ಆತ್ಮಹತ್ಯೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.