ADVERTISEMENT

ಸಿಆರ್‌ಪಿಎಫ್ ಬಂಕರ್ ಮೇಲೆ ಉಗ್ರರ ದಾಳಿ

ಪಿಟಿಐ
Published 29 ಅಕ್ಟೋಬರ್ 2019, 19:24 IST
Last Updated 29 ಅಕ್ಟೋಬರ್ 2019, 19:24 IST

ಶ್ರೀನಗರ : ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ತಪಾಸಣಾ ಕೇಂದ್ರದ ಮೇಲೆ ಮಂಗಳವಾರ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ನ 72 ನೇ ಬೆಟಾಲಿಯನ್‌ನ ಬಂಕರ್‌ ಮೇಲೆ ಉಗ್ರರು ಹಲವು ಬಾರಿ ಗುಂಡಿನ ದಾಳಿ ನಡೆಸಿದರು. ಪುಲ್ವಾಮಾದ ರಾಜ್‌ಪೋರ ಪ್ರದೇಶದ ಡ್ರಬ್ಗಾಮ್‌ನಲ್ಲಿ ಮಧ್ಯಾಹ್ನ 3.30 ರ ಸುಮಾರಿಗೆ ಈ ದಾಳಿ ನಡೆದಿದೆ. ಉಗ್ರರ ಮೇಲೆ ಸಿಆರ್‌ಪಿಎಫ್‌ ಯೋಧರು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT