ADVERTISEMENT

ಜಮ್ಮು–ಕಾಶ್ಮೀರ | ಉಗ್ರರ ದಾಳಿ; ಸಿಆರ್‌ಪಿಎಫ್‌ ಯೋಧ, ಒಬ್ಬ ನಾಗರಿಕ ಸಾವು

ಏಜೆನ್ಸೀಸ್
Published 1 ಜುಲೈ 2020, 3:55 IST
Last Updated 1 ಜುಲೈ 2020, 3:55 IST
ಗಾಯಗೊಂಡ ಸಿಆರ್‌ಪಿಎಫ್‌ ಯೋಧನನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದಲ್ಲಿರುವುದು–ಸಾಂದರ್ಭಿಕ ಚಿತ್ರ
ಗಾಯಗೊಂಡ ಸಿಆರ್‌ಪಿಎಫ್‌ ಯೋಧನನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದಲ್ಲಿರುವುದು–ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೊರ್‌ನಲ್ಲಿ ಉಗ್ರರು ದಾಳಿ ನಡೆಸಿದ್ದು, ಸಿಆರ್‌ಪಿಎಫ್‌ ಯೋಧ ಮತ್ತು ಒಬ್ಬ ನಾಗರಿಕ ಸಾವಿಗೀಡಾಗಿದ್ದಾರೆ.

ಸೊಪೊರ್‌ನಲ್ಲಿ ಗಸ್ತಿನಲ್ಲಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಮೂವರು ಯೋಧರು ಮತ್ತು ನಾಗರಿಕರೊಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ. ಸಿಆರ್‌ಪಿಎಫ್‌ ಯೋಧ ಹಾಗೂ ಒಬ್ಬ ನಾಗರಿಕ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.