ADVERTISEMENT

ರಾಂಚಿ | ಕಚ್ಚಾ ಬಾಂಬ್ ಸ್ಫೋಟ: ಸಿಆರ್‌ಪಿಎಫ್‌ ಸಿಬ್ಬಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 15:59 IST
Last Updated 15 ಡಿಸೆಂಬರ್ 2025, 15:59 IST
<div class="paragraphs"><p>ಬಾಂಬ್ (ಪ್ರಾತಿನಿಧಿಕ ಚಿತ್ರ)</p></div>

ಬಾಂಬ್ (ಪ್ರಾತಿನಿಧಿಕ ಚಿತ್ರ)

   

ರಾಂಚಿ: ಜಾರ್ಖಂಡ್‌ನ ಪಶ್ಚಿಮ ಸಿಂಹಭೂಮ್ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಂಭವಿಸಿದ ಕಚ್ಚಾ ಬಾಂಬ್‌ ಸ್ಫೋಟದಿಂದ ಸಿಆರ್‌ಪಿಎಫ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ವಿಮಾನದ ಮೂಲಕ ದೆಹಲಿಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ಸಿಬ್ಬಂದಿಯನ್ನು ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಕರೆತರಲು ‘ಗ್ರೀನ್‌ ಕಾರಿಡಾರ್‌’ ವ್ಯವಸ್ಥೆ ಮಾಡಲಾಗಿತ್ತು ಎಂದು ಹೇಳಿದರು.

ಪ್ರತ್ಯೇಕ ದಾಳಿಯಲ್ಲಿ ಗಾಯಗೊಂಡ ಕೋಬ್ರಾ ಬೆಟಾಲಿಯನ್‌ನ ಮತ್ತೊಬ್ಬ ಸಿಬ್ಬಂದಿಗೆ ರಾಂಚಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನೂ ದೆಹಲಿಗೆ ಕರೆತರುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಗಾಯಾಳುಗಳನ್ನು ಹೆಡ್‌ ಕಾನ್‌ಸ್ಟೆಬಲ್‌ ಅಲೋಕ್‌ ದಾಸ್‌ ಮತ್ತು ಸಿಪಾಯಿ ನಾರಾಯಣ್‌ ‌‌ದಾಸ್‌ ಎಂದು ಗುರುತಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.