ADVERTISEMENT

ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ ಸಿಆರ್‌ಪಿಎಫ್ ಯೋಧ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2025, 3:04 IST
Last Updated 14 ಫೆಬ್ರುವರಿ 2025, 3:04 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಇಂಫಾಲ: ಮಣಿಪುರದ ಶಿಬಿರವೊಂದರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರೊಬ್ಬರು, ಇಬ್ಬರು ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ ಕೊಂದಿದ್ದು, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಮ್‌ಸಾಂಗ್‌ನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಶಿಬಿರದಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್‌ನ ಕಾನ್‌ಸ್ಟೆಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 8 ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತರು ಸಿಆರ್‌ಪಿಎಫ್‌ನ 120 ನೇ ಬೆಟಾಲಿಯನ್‌ನ 'ಎಫ್' ಕಂಪನಿಗೆ ಸೇರಿದವರು. ಈ ಘಟನೆ ಬಗ್ಗೆ ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದರು.

ಈ ಸಂಬಂಧ ಮಣಿಪುರ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಮಾಹಿತಿ ನೀಡಿದ್ದು, ಘಟನೆಗೆ ನಿಖರವಾದ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.