ಪ್ರಾತಿನಿಧಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರೊಬ್ಬರು ತಮ್ಮ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಮಹಾರಾಷ್ಟ್ರದ ನಿವಾಸಿ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ.
ಇಂದು (ಮಂಗಳವಾರ) ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಟಿಕ್ರಿ ಪ್ರದೇಶದಲ್ಲಿ ರಸ್ತೆ ಉದ್ಘಾಟನೆ ಕಾರ್ಯಕ್ರಮಯೊಂದರಲ್ಲಿ ಭಾಗವಹಿಸಿದ್ದ ಯೋಧರೊಬ್ಬರು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯೋಧನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.