ಶ್ರೀನಗರ: ಶ್ರೀನಗರದ ಹೊರವಲಯದಲ್ಲಿರುವ ಲಾವಾಯ್‌ಪೊರಾದಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಓರ್ವ ಅಧಿಕಾರಿ ಹುತಾತ್ಮರಾಗಿದ್ದಾರೆ.
ಈ ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲಾವಾಯ್‌ಪೊರಾದ ಪರೀಂಪೊರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್‌ಪಿಎಫ್ ಪಡೆಯ ಮೇಲೆ ಉಗ್ರರು ಗುಂಡು ಹಾರಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಗಾಯಗೊಂಡಸೈನಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಉಗ್ರರ ದಾಳಿಯಲ್ಲಿ ಸಬ್ ಇನ್‌ಸ್ಪೆಕ್ಟರ್, ತ್ರಿಪುರಾ ಮೂಲದ ಮಂಗಾ ರಾಮ್ ದೇವ್ ಬರ್ಮನ್ ಹುತಾತ್ಮರಾಗಿದ್ದಾರೆ. ಕಾನ್‌ಸ್ಟೆಬಲ್ ನಜೀಮ್ ಅಲಿ, ಜಗನ್ನಾಥ್ ರೇ ಮತ್ತು ಅಶೋಕ್ ಕುಮಾರ್ ಗಾಯಗೊಂಡಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಇದೇ ಪ್ರದೇಶಗಳಲ್ಲಿ ಭದ್ರತಾ ಪಡೆಗಳ ಮೇಲೆ ಹಲವಾರು ದಾಳಿಗಳು ನಡೆದಿದ್ದು, ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರವನ್ನೇ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.