ADVERTISEMENT

ಉಗ್ರರ ದಾಳಿ: ಸಿಆರ್‌ಪಿಎಫ್‌ ಯೋಧ ಹುತಾತ್ಮ

ಪಿಟಿಐ
Published 24 ಸೆಪ್ಟೆಂಬರ್ 2020, 5:51 IST
Last Updated 24 ಸೆಪ್ಟೆಂಬರ್ 2020, 5:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್‌ ಬಳಿ ಉಗ್ರರು ನಡೆಸಿದ ದಾಳಿಯಲ್ಲಿ ಸಿಆರ್‌ಪಿಎಫ್‌ನ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಉಗ್ರರ ದಾಳಿಯಿಂದ ತೀವ್ರಗಾಯ‌ಗೊಂಡಿದ್ದ ಬುಡ್ಗಾಮ್‌ ಜಿಲ್ಲೆಯ 117ನೇ ಬೆಟಾಲಿಯನ್‌ನ ಯೋದನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿ ನಡೆಸಿದ ಉಗ್ರರು, ಯೋಧನ ಬಳಿಯಿದ್ದ ರೈಫಲ್‌ ಅನ್ನು ತೆಗೆದುಕೊಂಡು ಹೋಗಿದ್ದಾರೆ. ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಶೋಧಕಾರ್ಯ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.