ADVERTISEMENT

ಛತ್ತೀಸಗಡ: ಸಿಆರ್‌ಪಿಎಫ್‌ ಸಿಬ್ಬಂದಿಯಿಂದ ಗುಂಡಿನ ದಾಳಿ, 4 ಸಹೋದ್ಯೋಗಿಗಳು ಸಾವು

ಪಿಟಿಐ
Published 8 ನವೆಂಬರ್ 2021, 4:56 IST
Last Updated 8 ನವೆಂಬರ್ 2021, 4:56 IST
ಸಾಂದರ್ಭಿಕ ಚಿತ್ರ – ಪಿಟಿಐ
ಸಾಂದರ್ಭಿಕ ಚಿತ್ರ – ಪಿಟಿಐ   

ಸುಕ್ಮಾ: ಸಿಆರ್‌ಪಿಎಫ್‌ ಸಿಬ್ಬಂದಿಯೊಬ್ಬರು ನಡೆಸಿದ ಗುಂಡಿನ ದಾಳಿಯಲ್ಲಿ ಅರೆಸೇನಾ ಪಡೆಯ ನಾಲ್ವರು ಸಿಬ್ಬಂದಿ ಮೃತಪಟ್ಟ ಘಟನೆ ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರೈಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗನಪಲ್ಲಿ ಪ್ರದೇಶದಲ್ಲಿರುವ ಸಿಆರ್‌ಪಿಎಫ್‌ ಶಿಬಿರದಲ್ಲಿ ಸೋಮವಾರ ಮುಂಜಾನೆ 3.15ಕ್ಕೆ ದಾಳಿ ನಡೆದಿದೆ ಎಂದು ಬಸ್ತಾರ್ ವಲಯ ಐಜಿಪಿ ಸುಂದರ ರಾಜ್ ಪಿ. ತಿಳಿಸಿದ್ದಾರೆ.

ಸಿಆರ್‌ಪಿಎಫ್ ಸಿಬ್ಬಂದಿ ರಿತೇಶ್ ರಂಜನ್ ಎಂಬುವವರು ಎಕೆ–47 ಬಂದೂಕಿನಿಂದ ದಾಳಿ ನಡೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಭದ್ರಾಚಲಂ (ತೆಲಂಗಾಣ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಮೃತ ಸಿಬ್ಬಂದಿಯನ್ನು ರಾಜಮಣಿ ಕುಮಾರ್ ಯಾದವ್, ರಾಜೀವ್ ಮಂಡಲ್, ಧನ್‌ಜಿ ಮತ್ತು ಧರ್ಮೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆಸಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.