ADVERTISEMENT

ಪುಲ್ವಾಮ ಹುತಾತ್ಮ ಯೋಧರ ಹೆಸರಲ್ಲಿ ಇಂದು ಸ್ಮಾರಕ ಸ್ತಂಭ ಸ್ಥಾಪನೆ, ಗೌರವಾರ್ಪಣೆ  

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 2:13 IST
Last Updated 14 ಫೆಬ್ರುವರಿ 2020, 2:13 IST
   

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ 2019ರ ಫೆ. 14ರಂದು ನಡೆದಿದ್ದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧರ ಸ್ಮರಣಾರ್ಥ ಸ್ಮಾರಕ ಸ್ತಂಭ ಸಮರ್ಪಣೆ ಮಾಡಲಿರುವ ಕೇಂದ್ರ ಮೀಸಲು ಪೊಲೀಸ್‌ ಪಡೆ ಈ ಮೂಲಕ ಗೌರವ ಸಲ್ಲಿಸಲಿದೆ.

ಪುಲ್ವಾಮದ ಲೆಟ್‌ಪೋರಾ ಎಂಬಲ್ಲಿರುವ ಸಿಆರ್‌ಪಿಎಫ್‌ ತರಬೇತಿ ಕೇಂದ್ರದಲ್ಲಿ ಇಂದು ನಡೆಯುವ ಸಮಾರಂಭದಲ್ಲಿ ಸಿಆರ್‌ಪಿಎಫ್‌ನ ವಿಶೇಷ ಮಹಾ ನಿರ್ದೇಶಕ ಜೂಲ್ಫಿಕರ್‌ ಹಸನ್‌, ಕಾಶ್ಮೀರ ವಲಯದ ಪೊಲೀಸ್‌ ಮಹಾ ನಿರ್ದೇಶಕ ರಾಜೇಶ್‌ ಕುಮಾರ್‌ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇಂದಿನ ಸಮಾರಂಭದ ಈ ಕುರಿತು ಮಾತನಾಡಿರುವ ಸಿಆರ್‌ಪಿಎಫ್‌ನ ವಿಶೇಷ ಮಹಾ ನಿರ್ದೇಶಕ ಜೂಲ್ಫಿಕರ್‌ ಹಸನ್‌, ‘ವೀರಯೋಧರಿಗೆ ಗೌರವ ಸಮರ್ಪಣೆ ಮಾಡುವ ಈ ಸಮಾರಂಭದಲ್ಲಿ, ಸ್ಮಾರಕ ಸ್ತಂಭವನ್ನು ಅನಾವರಣ ಮಾಡಲಾಗುತ್ತದೆ. ಈ ಸ್ತಂಭದ ಮೇಲೆ ಹುತಾತ್ಮ ಯೋಧರ ಹೆಸರುಗಳನ್ನು ಬರೆಯಲಾಗಿದೆ. ಇದೇ ಸಮಾರಂಭದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ,’ ಎಂದು ಹೇಳಿದ್ದಾರೆ.

ADVERTISEMENT

‘ಯೋಧರು ಹುತಾತ್ಮರಾದ ಈ ದಿನ ಅವರ ಮನೆಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಏರ್ಪಾಡಾಗುತ್ತವೆ. ಹಾಗಾಗಿಯೇ ಈ ಸಮಾರಂಭಕ್ಕೆ ಯೋದರ ಕುಟುಂಬಸ್ಥರನ್ನು ಆಹ್ವಾನಿಸಿಲ್ಲ,’ ಎಂದು ಹಸನ್‌ ತಿಳಿಸಿದರು.

2019ರ ಫೆ. 14ರಂದು ಪುಲ್ವಾಮದಲ್ಲಿ ಸಿಆರ್‌ಪಿಎಫ್‌ ಯೋಧರಿದ್ದ ಬಸ್‌ ಮೇಲೆ ಜೈಷ್‌ ಏ ಮೊಹಮದ್‌ ಸಂಘಟನೆ ಉಗ್ರರು ಬಾಂಬ್‌ ದಾಳಿ ನಡೆಸಿದ್ದರು. ಘಟನೆಯಲ್ಲಿ 40 ಯೋದರು ಹುತಾತ್ಮರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.