ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, ಭದ್ರತಾ ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಭದ್ರತಾ ಪಡೆಗಳು ಪುಲ್ವಾಮಾದ ಗಾಂಗೂ ಪ್ರದೇಶದಲ್ಲಿ ಸಾಗುತ್ತಿರುವುದಾಗಿ ಸ್ಫೋಟ ಸಂಭವಿಸಿದೆ. ಸ್ಫೋಟದ ಬಳಿಕ ಭದ್ರತಾ ಪಡೆಗಳು ಕೆಲವು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸಿಆರ್‌ಪಿಎಫ್‌ನ ಯೋಧರೊಬ್ಬರು ಗಾಯಗೊಂಡಿದ್ದಾರೆ.
ಉಗ್ರರು ಸುಧಾರಿತ ಸ್ಫೋಟಕ ಸಾಧಕದ (ಐಇಡಿ) ಬಳಸಿ ದಾಳಿ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆದಿದೆ.
ಕಳೆದ ನಾಲ್ಕು ದಿನಗಳಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ನಡೆದಿರುವ ಎರಡನೇ ದಾಳಿ ಇದಾಗಿದೆ. ಬುಧವಾರ ಸಪೋರ್‌ನಲ್ಲಿ ಸಿಆರ್‌ಪಿಎಫ್ ಯೋಧ ಮತ್ತು ನಾಗರಿಕರೊಬ್ಬರು ಉಗ್ರರ ಗುಂಡಿನ ದಾಳಿಯಿಂದ ಸಾವಿಗೀಡಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.