ADVERTISEMENT

ನದಿಗೆ ಉರುಳಿದ ವಾಹನ: ಸಿಆರ್‌ಪಿಎಫ್‌ನ 9 ಸಿಬ್ಬಂದಿಗೆ ಗಾಯ

ಪಿಟಿಐ
Published 21 ಫೆಬ್ರುವರಿ 2026, 16:22 IST
Last Updated 21 ಫೆಬ್ರುವರಿ 2026, 16:22 IST
<div class="paragraphs"><p>ಅಪಘಾತ</p></div>

ಅಪಘಾತ

   

ಸಾಂದರ್ಭಿಕ ಚಿತ್ರ

ಶ್ರೀನಗರ: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ವಾಹನವು ನದಿಗೆ ಉರುಳಿದ ಪರಿಣಾಮ ಒಂಬತ್ತು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ADVERTISEMENT

ಶ್ರೀನಗರದ ಹೊರ ವಲಯದಲ್ಲಿರುವ ಅಹ್ಮದ್‌ನಗರದಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ವಾಹನವು ನದಿಗೆ ಉರುಳಿದೆ. ಗಾಯಾಳು ಸಿಬ್ಬಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.