ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರ್ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.
ಬಸಂತ್ ಘರ್‌ನಿಂದ ಕಾರ್ಯಾಚರಣೆ ಮುಗಿಸಿ ಹಿಂತಿರಗುತ್ತಿದ್ದಾಗ ಕಡ್ಡಾ ಪ್ರದೇಶದಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ವಾಹನವು ಸಿಆರ್‌ಪಿಎಫ್ 187 ಬೆಟಾಲಿಯನ್‌ಗೆ ಸೇರಿದೆ ಎಂದು ತಿಳಿಸಿದ್ದಾರೆ.
'ವಾಹನದಲ್ಲಿ 23 ಸಿಬ್ಬಂದಿ ಇದ್ದರು. ಇಬ್ಬರು ಸಿಬ್ಬಂದಿ ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡ 15 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.