ತಿರುವನಂತಪುರ: ಚರ್ಚ್ ಆಫ್ ಸೌತ್ ಇಂಡಿಯಾದ (ಸಿಎಸ್‌ಐ) ದಕ್ಷಿಣ ಕೇರಳ ಧರ್ಮಪ್ರಾಂತ್ಯದ ಬಿಷಪ್ ಧರ್ಮರಾಜ್ ರಸಾಲಂ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ತಿರುವನಂತಪುರದಲ್ಲಿ ಚರ್ಚ್‌ನ ಅಧೀನದಲ್ಲಿರುವ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಕ್ಯಾಪಿಟೇಷನ್ ಶುಲ್ಕ ಸಂಗ್ರಹಿಸಿಹಣಕಾಸಿನ ದುಬರ್ಳಕೆ ಮಾಡಿರುವ ಆರೋಪದಲ್ಲಿ ರಸಾಲಂ ಅವರನ್ನು ಇ.ಡಿ ಅಧಿಕಾರಿಗಳು ಸೋಮವಾರ ವಿಚಾರಣೆಗೆ ಒಳಪಡಿಸಿದ್ದರು.
ಚರ್ಚ್‌ನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಿಟನ್‌ಗೆ ತೆರಳುವುದಾಗಿ ಹೇಳಿ ದೇಶ ತೊರೆಯಲು ಮುಂದಾದಾಗ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.