ADVERTISEMENT

ಸಿಯುಇಟಿ–ಯುಜಿ: 14 ಲಕ್ಷ ಅರ್ಜಿ ಸಲ್ಲಿಕೆ

ಪಿಟಿಐ
Published 4 ಏಪ್ರಿಲ್ 2023, 15:59 IST
Last Updated 4 ಏಪ್ರಿಲ್ 2023, 15:59 IST
   

ನವದೆಹಲಿ: ಈ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಯುಇಟಿ–ಯುಜಿ) ಸುಮಾರು 14 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಲ್ಲಿಕೆಯಾಗಿದ್ದ ಒಟ್ಟು ಅರ್ಜಿಗಳ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಶೇ 41ರಷ್ಟು ಅರ್ಜಿಗಳು ಹೆಚ್ಚಾಗಿವೆ ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೇಶ್ ಕುಮಾರ್‌ ಅವರು ಹೇಳಿದ್ದಾರೆ.

ದೆಹಲಿ ವಿ.ವಿಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ. ನಂತರದ ಸ್ಥಾನದಲ್ಲಿ ಬನಾರಸ್‌ ಹಿಂದು ವಿ.ವಿ ಮತ್ತು ಅಲಹಾಬಾದ್‌ ವಿ.ವಿಗಳಿವೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ಬಹುತೇಕರು ಉತ್ತರ ಪ್ರದೇಶದವರು. ನಂತರದ ಸ್ಥಾನಗಳಲ್ಲಿ ದೆಹಲಿ ಮತ್ತು ಬಿಹಾರದ ವಿದ್ಯಾರ್ಥಿಗಳಿದ್ದಾರೆ.

ಸಿಯುಇಟಿ–ಯುಜಿಯನ್ನು 2021ರಲ್ಲಿ ಪರಿಚಯಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.