ADVERTISEMENT

ಸಿಯುಇಟಿ ವೇಳಾಪಟ್ಟಿ ಪರಿಷ್ಕರಣೆ ಸಾಧ್ಯತೆ: ಯುಜಿಸಿ

ಪಿಟಿಐ
Published 3 ಮಾರ್ಚ್ 2024, 13:15 IST
Last Updated 3 ಮಾರ್ಚ್ 2024, 13:15 IST
ಜಗದೀಶ್‌ ಕುಮಾರ್‌
ಜಗದೀಶ್‌ ಕುಮಾರ್‌   

ನವದೆಹಲಿ: ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಬಳಿಕ, ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಯುಜಿ) ವೇಳಾಪಟ್ಟಿಯನ್ನು ಪರಿಷ್ಕರಿಸಲಾಗುವುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ.

ಸಿಯುಇಟಿ ಪರೀಕ್ಷೆಯು ಮೇ 15ರಿಂದ 31ರವರೆಗೆ ನಡೆಯಲಿದ್ದು, ಜೂನ್‌ 30ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (ಎನ್‌ಟಿಎ) ಇತ್ತೀಚೆಗೆ ಘೋಷಿಸಿತ್ತು.

ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕಗಳು ಇದೇ ತಿಂಗಳಲ್ಲಿ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಯುಜಿಸಿ ಅಧ್ಯಕ್ಷರು ಈ ಕುರಿತು ಹೇಳಿಕೆ ನೀಡಿದ್ದಾರೆ.

ADVERTISEMENT

‘ಎನ್‌ಟಿಎ ಇತ್ತೀಚೆಗೆ ಬಿಡುಗಡೆ ಮಾಡಿರುವುದು ತಾತ್ಕಾಲಿಕ ವೇಳಾಪಟ್ಟಿ ಆಗಿದೆ. ಚುನಾವಣಾ ದಿನಾಂಕಗಳು ಪ್ರಕಟವಾದ ಬಳಿಕ ಸಿಯುಇಟಿ–ಯುಜಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಎನ್‌ಟಿಎ ಪ್ರಕಟ ಮಾಡಲಿದೆ’ ಎಂದು ಯುಜಿಸಿ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ.

ಅರ್ಜಿ ಸಲ್ಲಿಸಲು ಮಾರ್ಚ್‌ 26ರವರೆಗೆ ಅವಕಾಶ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.