ADVERTISEMENT

ಸಿಯುಇಟಿ–ಯುಜಿ ಪರೀಕ್ಷೆ ಮರುನಿಗದಿ

ಪಿಟಿಐ
Published 13 ಆಗಸ್ಟ್ 2022, 14:52 IST
Last Updated 13 ಆಗಸ್ಟ್ 2022, 14:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶ ಪರೀಕ್ಷೆಯ (ಸಿಯುಇಟಿ–ಯುಜಿ) ನಾಲ್ಕನೇ ಹಂತದ ಪರೀಕ್ಷೆಯನ್ನು ಇದೇ 30ಕ್ಕೆ ನಿಗದಿಪಡಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕಾಗಿ ನಗರ ಆಯ್ಕೆ ಮಾಡಲು11 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಈ ಪರಿಷ್ಕರಣೆ ಮಾಡಲಾಗಿದೆ.

ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಾಲ್ಕನೇ ಹಂತದ ಸಿಯುಇಟಿ ಇದೇ 17 ರಿಂದ 20 ರವರೆಗೆ ನಿಗದಿಯಾಗಿತ್ತು. ಈ ಪರೀಕ್ಷೆಗಳಿಗೆ 3.72 ಲಕ್ಷ ಅಭ್ಯರ್ಥಿಗಳು ಹಾಜರಾಗಬೇಕಿತ್ತು. ಇದೇ ತಿಂಗಳು 20ಕ್ಕೆ ಕೊನೆಗೊಳ್ಳಬೇಕಿದ್ದ ಪರೀಕ್ಷೆಗಳು ಇದೀಗ 30ರಂದು ಮುಕ್ತಾಯಗೊಳ್ಳಲಿದೆ ಎಂದು ಎನ್‌ಟಿಎ ತಿಳಿಸಿದೆ.

‘ಎನ್‌ಟಿಎ(ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ) ಕೇಂದ್ರಗಳ ಸಾಮರ್ಥ್ಯ ಹೆಚ್ಚಿಸಿದೆ ಮತ್ತು ಕೇಂದ್ರಗಳ ಗುಣಮಟ್ಟ ಹೆಚ್ಚಿಸಲು ಪ್ರಯತ್ನ ಮಾಡುವುದರ ಜೊತೆಗೆ ಹೆಚ್ಚಿನ ಪರೀಕ್ಷಾ ಕೇಂದ್ರ ಸೇರಿಸಿದೆ’ ಎಂದು ಯುಜಿಸಿ ಅಧ್ಯಕ್ಷ ಜಗದೀಶ್‌ ಕುಮಾರ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.