ADVERTISEMENT

ದೇಶದಾದ್ಯಂತ 109 ಕೋಟಿಗೂ ಅಧಿಕ ಕೋವಿಡ್‌ ಲಸಿಕೆ ಡೋಸ್‌ ವಿತರಣೆ

ಪಿಟಿಐ
Published 8 ನವೆಂಬರ್ 2021, 16:24 IST
Last Updated 8 ನವೆಂಬರ್ 2021, 16:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಈವರೆಗೆ 109 ಕೋಟಿಗೂ ಅಧಿಕ ಕೋವಿಡ್ ಲಸಿಕೆ ಡೋಸ್ ನೀಡಲಾಗಿದೆ ಎಂದು ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರ ಸಂಜೆ 7ಗಂಟೆಗೆ ಕೊನೆಗೊಂಡಂತೆ ದೇಶದಲ್ಲಿ 54 ಲಕ್ಷ ಡೋಸ್‌ಗಳನ್ನು ನೀಡಲಾಗಿದೆ.

ದೇಶದಾದ್ಯಂತ ಜನವರಿ 16 ರಿಂದ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಿಸುವ ಮೂಲಕ ಅಭಿಯಾನ ಆರಂಭಿಸಲಾಯಿತು. ಫೆಬ್ರುವರಿ 2ರ ಬಳಿಕ ಮುಂಚೂಣಿ ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಲಸಿಕೆ ನೀಡಲಾಗಿತ್ತು.

ADVERTISEMENT

ಮಾರ್ಚ್‌ 1ರಿಂದ ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಏಪ್ರಿಲ್‌ 1ರ ಬಳಿಕ 45 ವರ್ಷ ಮೇಲಿನವರಿಗೆ ಲಸಿಕೆ ವಿತರಿಸಲಾಯಿತು.

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರವು ಅಭಿಯಾನವನ್ನು ವಿಸ್ತರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.