ADVERTISEMENT

ದೇಶದಾದ್ಯಂತ 47 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ಪಿಟಿಐ
Published 1 ಆಗಸ್ಟ್ 2021, 7:37 IST
Last Updated 1 ಆಗಸ್ಟ್ 2021, 7:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 60,15,842 ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 47 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರು ಕೋಟಿಗೂ ಹೆಚ್ಚು ಬಳಕೆಯಾಗದ ಲಸಿಕೆಗಳು ಉಳಿದಿವೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಸುಮಾರು 49,49,89,550 ಡೋಸ್‌ ಲಸಿಕೆಗಳನ್ನು ವಿವಿಧ ಮೂಲಗಳಿಂದ ಒದಗಿಸಲಾಗಿದೆ. ಇದರಲ್ಲಿ 46,70,26,662 ಡೋಸ್ ಲಸಿಕೆಗಳನ್ನು ಬಳಸಲಾಗಿದೆ.

ADVERTISEMENT

ಒಟ್ಟಾರೆಯಾಗಿ ಎಲ್ಲಾ ರಾಜ್ಯಗಳಲ್ಲಿ 18-44 ವರ್ಷ ವಯಸ್ಸಿನ 15,61,40,811 ಜನರಿಗೆ ಮೊದಲ ಡೋಸ್‌ ಕೋವಿಡ್‌ ಲಸಿಕೆ ವಿತರಿಸಲಾಗಿದೆ. ಕೇಂದ್ರಾಡಳಿತ ಪ್ರದೇಶಗಳಲ್ಲಿ 86,68,370 ಜನರು ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

ಒಟ್ಟಾರೆಯಾಗಿ 45-59 ವರ್ಷ ವಯಸ್ಸಿನ 10,63,39,854 ಜನರು ಮೊದಲ ಡೋಸ್ ತೆಗೆದುಕೊಂಡಿದ್ದಾರೆ. 3,91,28,126 ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

60ಕ್ಕಿಂತ ಹೆಚ್ಚು ವಯಸ್ಸಿನ 7,60,38,913 ಜನರು ಮೊದಲ ಡೋಸ್ ಪಡೆದಿದ್ದು, 3,65,19,484 ಜನರು ಎರಡನೇ ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.