ADVERTISEMENT

ಮಣಿಪುರ | ಮೊರೆಹ್‌ ಪಟ್ಟಣದಲ್ಲಿ ಕರ್ಫ್ಯೂ ಮುಂದುವರಿಕೆ

ಪಿಟಿಐ
Published 10 ಅಕ್ಟೋಬರ್ 2023, 9:01 IST
Last Updated 10 ಅಕ್ಟೋಬರ್ 2023, 9:01 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಂಫಾಲ: ಭಾರತ–ಮ್ಯಾನ್ಮಾರ್‌ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ದೈನಂದಿನ ಕರ್ಫ್ಯೂ ಮುಂದುವರಿಸಿ ಮಣಿಪುರದ ತೆಂಗ್ನೌಪಾಲ್‌ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರತಿದಿನ ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ಔಷಧಿ ಮತ್ತು ಆಹಾರ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಅನುಕೂಲವಾಗುವಂತೆ ಕರ್ಫ್ಯೂ ಸಡಿಲಿಸಲಾಗಿತ್ತು. ಆದರೆ, ಕರ್ಫ್ಯೂ ಸಡಿಲಿಕೆ ಮಾಡುವುದರಿಂದ ಸಾರ್ವಜನಿಕರು ಗುಂಪುಗೂಡುವ ಸಾಧ್ಯತೆ ಇರುವುದರಿಂದ ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ.

ADVERTISEMENT

ಆದರೆ, ಜಿಲ್ಲೆಯ ಉಳಿದ ಭಾಗಗಳಲ್ಲಿ ಕರ್ಫ್ಯೂ ಸಡಿಲಿಕೆಯು ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ಯಥಾಸ್ಥಿತಿಯಲ್ಲಿ ಇರಲಿದೆ. ಕಾನೂನು ಮತ್ತು ಸುವ್ಯವಸ್ಥೆ ಜಾರಿಯಲ್ಲಿ ತೊಡಗಿರುವ ಸರ್ಕಾರಿ ಸಂಸ್ಥೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.