ADVERTISEMENT

ಸಾಮಾಜಿಕ ಮಾಧ್ಯಮಗಳಿಂದ ದೂರ ಉಳಿಯಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ?

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2020, 1:45 IST
Last Updated 3 ಮಾರ್ಚ್ 2020, 1:45 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಎಲ್ಲ ಸಾಮಾಜಿಕ ಮಾಧ್ಯಮ ಖಾತೆಗಳಿಂದ ದೂರ ಉಳಿಯುವ ಚಿಂತನೆಯಲ್ಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಮೋದಿ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸೋಮವಾರ ರಾತ್ರಿ ಈ ಕುರಿತ ಅಚ್ಚರಿಯ ಸಂದೇಶವೊಂದು ಕಾಣಿಸಿಕೊಂಡಿದೆ.

‘ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಹಾಗೂ ಯೂಟ್ಯೂಬ್‌ನ ನನ್ನ ಖಾತೆಗಳನ್ನು ಕೈಬಿಡಲು ಭಾನುವಾರ ಯೋಚಿಸುತ್ತಿದ್ದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇನೆ’ ಎಂದು ಟ್ವಿಟರ್‌ನಲ್ಲಿ ಅವರು ಹೇಳಿದ್ದಾರೆ.

ಮೋದಿ ಅವರು ಟ್ವಿಟರ್‌ನಲ್ಲಿ 5.3 ಕೋಟಿ, ಫೇಸ್‌ಬುಕ್‌ನಲ್ಲಿ 4.4 ಕೋಟಿ, ಇನ್‌ಸ್ಟಾಗ್ರಾಮ್‌ನಲ್ಲಿ 3.5 ಕೋಟಿ ಫಾಲೋವರ್ಸ್‌ ಹೊಂದಿದ್ದಾರೆ. ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಜಗತ್ತಿನ ನಾಯಕರಲ್ಲಿ ಮೋದಿ ಅವರು ಮುಂಚೂಣಿಯಲ್ಲಿದ್ದಾರೆ. ಭಾರತದ ರಾಜಕಾರಣಿಗಳ ಪೈಕಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ಜನರನ್ನು ನೇರವಾಗಿ ತಲುಪಲು ಸಾಮಾಜಿಕ ಜಾಲತಾಣಗಳನ್ನು ಆರಂಭದಿಂದಲೇ ಬಳಸಿ ಜನಪ್ರಿಯತೆ ಗಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.