ADVERTISEMENT

ಹೊಸ ಮಾರ್ಗಸೂಚಿ ನ.30ರವರೆಗೆ ಅನ್ವಯ: ಕೇಂದ್ರ

ಪಿಟಿಐ
Published 27 ಅಕ್ಟೋಬರ್ 2020, 16:23 IST
Last Updated 27 ಅಕ್ಟೋಬರ್ 2020, 16:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಂಟೈನ್‌ಮೆಂಟ್‌ ವಲಯ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ ತೆರೆಯಲು ಅನುಮತಿ ಸೇರಿದಂತೆ ಇತರೆ ಚಟುವಟಿಕೆಗಳ ಆರಂಭಕ್ಕೆ ಅನುಮತಿ ನೀಡಿ ಹೊರಡಿಸಲಾಗಿರುವ ಮಾರ್ಗಸೂಚಿಗಳು, ನ.30ರವರೆಗೆ ಅನ್ವಯವಾಗಿರಲಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಹಲವು ಚಟುವಟಿಕೆಗಳ ಪುನರಾರಂಭಕ್ಕೆ ಅನುಮತಿ ನೀಡಿ ಸೆ.30ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಯು ಅ.31ರವರೆಗೆ ಅನ್ವಯವಾಗಿತ್ತು. ಈ ಅವಧಿಯನ್ನು ನ.30ರವರೆಗೆ ವಿಸ್ತರಿಸಿ ಕೇಂದ್ರ ಗೃಹ ಇಲಾಖೆಯು ಮಂಗಳವಾರ ಆದೇಶ ಹೊರಡಿಸಿದೆ.

ಕೇಂದ್ರದ ಅನುಮತಿ ಹೊರತುಪಡಿಸಿ, ಅಂತರರಾಷ್ಟ್ರೀಯ ಪ್ರಯಾಣವನ್ನು ಮುಂದಿನ ಆದೇಶದವರೆಗೂ ನಿರ್ಬಂಧಿಸಲಾಗಿದೆ. ಶಾಲೆಗಳನ್ನು, ಕೋಚಿಂಗ್‌ ಕೇಂದ್ರಗಳನ್ನು ಹಂತಹಂತವಾಗಿ ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಆಯಾ ರಾಜ್ಯ ಸರ್ಕಾರಗಳೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ರಾಜ್ಯದಲ್ಲಿರುವ ಕೋವಿಡ್‌ ಸ್ಥಿತಿಯನ್ನು ಗಮನದಲ್ಲಿ ಇರಿಸಿಕೊಂಡು ಶಾಲೆಗಳು ಹಾಗೂ ಆಡಳಿತ ಮಂಡಳಿ ಜೊತೆ ಚರ್ಚಿಸಿ ಷರತ್ತುಬದ್ಧ ನಿರ್ಧಾರ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.