ADVERTISEMENT

ಮೇ ಅಂತ್ಯಕ್ಕೆ ಕೋವಿಡ್‌ ಪ್ರಸರಣ ಇಳಿಮುಖ ಸಾಧ್ಯತೆ: ಖ್ಯಾತ ಲಸಿಕೆ ತಜ್ಞೆ ಗಗನದೀಪ್‌

ಪಿಟಿಐ
Published 6 ಮೇ 2021, 15:51 IST
Last Updated 6 ಮೇ 2021, 15:51 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮೇ ತಿಂಗಳ ಮಧ್ಯದಲ್ಲಿ ಇಲ್ಲವೇ ತಿಂಗಳಾಂತ್ಯಕ್ಕೆ ದೇಶದಲ್ಲಿ ಕೋವಿಡ್‌–19 ಪ್ರಕರಣಗಳಲ್ಲಿ ಇಳಿಕೆ ಕಂಡು ಬರಬಹುದು ಎಂದು ಖ್ಯಾತ ಲಸಿಕೆ ತಜ್ಞೆ ಗಗನದೀಪ್‌ ಕಾಂಗ್‌ ಹೇಳಿದ್ದಾರೆ.

‘ಬರುವ ದಿನಗಳಲ್ಲಿ ಇನ್ನೂ ಎರಡು ಅಥವಾ ಮೂರು ಬಾರಿ ಅತ್ಯಧಿಕ ಕೋವಿಡ್‌ ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ. ಆದರೆ, ಈಗ ಕಂಡುಬಂದಿರವಷ್ಟು ತೀವ್ರತೆ ಇರುವುದಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಈ ಸೋಂಕು ಈಗ ಜಗತ್ತಿನ ಎಲ್ಲ ಪ್ರದೇಶಗಳಲ್ಲೂ ವ್ಯಾಪಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ಕೋವಿಡ್‌ ಪ್ರಕರಣಗಳು ಕಾಣಿಸಿಕೊಂಡಿವೆ’ ಎಂದು ಹೇಳಿದ್ದಾರೆ.

ADVERTISEMENT

‘ಕೋವಿಡ್‌ ಲಸಿಕೆಗಳು ಸುರಕ್ಷಿತ ಹಾಗೂ ಪರಿಣಾಕಾರಿ ಎಂಬುದು ಸಾಬೀತಾಗಿದೆ. ಹೀಗಾಗಿ ಲಸಿಕೆ ನೀಡುವುದಕ್ಕೆ ಮತ್ತಷ್ಟೂ ಚುರುಕು ನೀಡುವುದರಿಂದ ಕೊರೊನಾ ವೈರಸ್‌ ಸೋಂಕಿನ ಪ್ರಸರಣಕ್ಕೆ ಕಡಿವಾಣ ಹಾಕಲು ಸಾಧ್ಯ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.