ADVERTISEMENT

ಮುಂಬೈ ವಿಮಾನ ನಿಲ್ದಾಣದಲ್ಲಿ ₹32 ಕೋಟಿ ಮೌಲ್ಯದ ಚಿನ್ನ ವಶ, 7 ಮಂದಿ ಬಂಧನ

ಪಿಟಿಐ
Published 13 ನವೆಂಬರ್ 2022, 12:48 IST
Last Updated 13 ನವೆಂಬರ್ 2022, 12:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮುಂಬೈಯ ಛತ್ರಪತಿ ವಿಮಾನ ನಿಲ್ದಾಣದಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ₹32 ಕೋಟಿ ಮೌಲ್ಯದ 61 ಕೆ.ಜಿ ಚಿನ್ನ ವಶಪಡಿಸಿಕೊಂಡಿದ್ದಾರೆ.

ಇದು ಮುಂಬೈ ವಿಮಾನ ನಿಲ್ದಾಣದ ಇತಿಹಾಸದಲ್ಲಿ ಕಸ್ಟಮ್ಸ್ ಒಂದೇ ದಿನದಲ್ಲಿ ನಡೆಸಿದ ಅತ್ಯಧಿಕ ಮೌಲ್ಯದ ಕಾರ್ಯಾಚರಣೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರೂ ಸಂಬಂಧಿಸಿದಂತೆ ಏಳು ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ.

ಮೊದಲ ಕಾರ್ಯಾಚರಣೆಯಲ್ಲಿ ತಾಂಜಾನಿಯಾದಿಂದ ಹಿಂದಿರುಗಿದ ನಾಲ್ವರು ಭಾರತೀಯರು 1 ಕೆ.ಜಿ ಚಿನ್ನದ ಗಟ್ಟಿಯನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾದ ಬೆಲ್ಟ್‌ಗಳಲ್ಲಿ ಸಾಗಿಸಲು ಯತ್ನಿಸುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಯಾಣಿಕರು ದೇಹಕ್ಕೆ ಧರಿಸಿದ್ದ ಬೆಲ್ಟ್‌ನಿಂದ ಸಾಗಿಸಲು ಯತ್ನಿಸುತ್ತಿದ್ದ ₹28.17 ಕೋಟಿ ಮೌಲ್ಯದ 53 ಕೆ.ಜಿ ಚಿನ್ನದ ಗಟ್ಟಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಯಾಣಿಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದಕ್ಕೆ ಸಮಾನವಾಗಿ ದುಬೈನಿಂದ ಬಂದಿದ್ದ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು ₹3.88 ಕೋಟಿ ಮೌಲ್ಯದ 8 ಕೆ.ಜಿ ಚಿನ್ನ ವಶಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.