ADVERTISEMENT

ಹಿಮಾಚಲ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ: ಹಣಕ್ಕೆ ಬೇಡಿಕೆ

ಪಿಟಿಐ
Published 30 ಜನವರಿ 2023, 9:05 IST
Last Updated 30 ಜನವರಿ 2023, 9:05 IST
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್   

ಶಿಮ್ಲಾ: ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆಯನ್ನು ಸೃಷ್ಟಿಸಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ.

ತಮ್ಮ ಹೆಸರಿನಲ್ಲಿ ಸೃಷ್ಠಿಸಲಾಗಿರುವ ನಕಲಿ ಖಾತೆಯನ್ನು ಬಳಸಿಕೊಂಡು, ಕೆಲವು ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಜನರು ಜಾಗೃತರಾಗಿರಿ ಮತ್ತು ಅಂತಹ ಸಂದೇಶಗಳ ಕಡೆ ಗಮನಹರಿಸಬೇಡಿ ಎಂದು ಅರ್ಲೇಕರ್ ಸೋಮವಾರ ಹೇಳಿದ್ದಾರೆ.

ಈ ಸಂಬಂಧ ಹಿಮಾಚಲ ಪ್ರದೇಶ ಪೊಲೀಸರು ದೂರನ್ನು ದಾಖಲಿಸಿದ್ದಾರೆ ಹಾಗೂ ಖಾತೆಯನ್ನು ನಿಷ್ಕ್ರಿಯಗೊಳಿಸುವಂತೆ ಈಗಾಗಲೇ ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.

ADVERTISEMENT

ಕಳೆದ ವರ್ಷ, ಶಂಕಿತ ಸೈಬರ್ ಕ್ರಿಮಿನಲ್‌ಗಳು ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪದಲ್ಲಿ ಹಣ ಪಡೆಯಲು ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯಂತಹ ಹಿರಿಯ ನಾಯಕರ ಹೆಸರನ್ನು ಬಳಸಿಕೊಂಡು ವಂಚಿಸಿದ್ದರು.

ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು 18,000 ಸೈಬರ್ ಅಪರಾಧದ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ಶೇ 50ರಷ್ಟು ಹಣಕಾಸು ವಂಚನೆಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.