(ಚಿತ್ರ ಕೃಪೆ: @Indiametdept)
ಪೋರ್ಟ್ ಬ್ಲೇರ್: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಅಕ್ಟೋಬರ್ 21ರಿಂದ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ, ಭಾರತೀಯ ಹವಾಮಾನ ಇಲಾಖೆಯು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಚಂಡಮಾರುತದ ಎಚ್ಚರಿಕೆ ನೀಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಕ್ಟೋಬರ್ 23ರವರೆಗೆ ಭಾರಿ ಮಳೆಯಾಗಲಿರುವ ಸಾಧ್ಯತೆ ಇರುವುದರಿಂದ ಸ್ಥಳೀಯ ಬಂದರುಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ನಿಕೋಬಾರ್ ದ್ವೀಪಗಳ ಒಂದೆರೆಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 21ರಿಂದ 25ರವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಒಂದೆರೆಡು ಸ್ಥಳಗಳಲ್ಲಿ ಬಿರುಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಕರ್ನಾಟಕದ ಕರಾವಳಿ ಪ್ರದೇಶಗಳಲ್ಲೂ ಅಕ್ಟೋಬರ್ 24ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.