ADVERTISEMENT

Cyclone Alert: ವಾಯುಭಾರ ಕುಸಿತ; ಆಂಧ್ರ, ಒಡಿಶಾ,ತ.ನಾಡು ಕರಾವಳಿಯಲ್ಲಿ ಭಾರಿ ಮಳೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಆಗಸ್ಟ್ 2025, 5:27 IST
Last Updated 19 ಆಗಸ್ಟ್ 2025, 5:27 IST
<div class="paragraphs"><p>(ಚಿತ್ರ ಕೃಪೆ: IMD)</p></div>

(ಚಿತ್ರ ಕೃಪೆ: IMD)

   

ಚೆನ್ನೈ: ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ, ಒಡಿಶಾ ಮತ್ತು ತಮಿಳುನಾಡು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನಚ್ಚೆರಿಕೆ ನೀಡಿದೆ.

ವಾಯುಭಾರ ಕುಸಿತಕ್ಕೆ ಸಂಬಂಧಿಸಿದಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆಗಸ್ಟ್ 18 ಮಧ್ಯರಾತ್ರಿ ಉಂಟಾಗಿರುವ ವಾಯುಭಾರ ಕುಸಿತವು ಇಂದು ದಕ್ಷಿಣ ಒಡಿಶಾ ಹಾಗೂ ಉತ್ತರ ಆಂಧ್ರಪ್ರದೇಶದ ಕರಾವಳಿ ಪ್ರದೇಶವನ್ನು ದಾಟುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ADVERTISEMENT

ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿಯಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದೆ ಎಂದು ವರದಿಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ನಾಗಪಟ್ಟಿಣಂ ಬಂದರಿನಲ್ಲಿ ಚಂಡಮಾರುತದ ಎಚ್ಚರಿಕೆಯನ್ನು ನೀಡಲಾಗಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಬೈಯಲ್ಲಿ ಇಂದು ಸರ್ಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ. ಖಾಸಗಿ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.