ಕಛ್: ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದಾದ ಹಾನಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಅಮಿತ್ ಶಾ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಇದ್ದರು.
ಕಛ್ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಅಮಿತ್ ಶಾ, ಬಳಿಕ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಅಲ್ಲಿಂದ ಮಾಂಡವಿಯ ಎಸ್‌ಡಿಎಚ್ ಆಸ್ಪತ್ರೆಗೆ ತೆರಳಿ ಜನರ ಆರೋಗ್ಯವನ್ನು ವಿಚಾರಿಸಿದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಕರ್ತವ್ಯನಿರತ ಸಿಬ್ಬಂದಿಗಳನ್ನು ಭೇಟಿ ಮಾಡಿ ಅಮಿತ್ ಶಾ ಸಮಾಲೋಚನೆ ನಡೆಸಿದ್ದಾರೆ.
ಚಂಡಮಾರುತ ಅಪ್ಪಳಿಸಿದ ಕಛ್ ಜಿಲ್ಲೆಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.