
ಚೆನ್ನೈ: ದಿತ್ವಾ ಚಂಡಮಾರುತ ಜೋರಾಗಿದ್ದು, ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಚೆನ್ನೈ, ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿವೆ.
ಹವಾಮಾನ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಚೆನ್ನೈ ಜಿಲ್ಲಾಧಿಕಾರಿ ರೋಶ್ನಿ ಸಿದ್ಧಾರ್ಥ ಜಗಾಡೆ ತಿಳಿಸಿದ್ದಾರೆ. ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲೂಇದೇ ರೀತಿಯ ಆದೇಶ ಹೊರಡಿಸಲಾಗಿದೆ.
ಭಾರಿ ಮಳೆ ಮತ್ತು ನೀರಿನ ಸಂಗ್ರಹದಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿವಾಸಿಗಳು ಜಾಗರೂಕರಾಗಿರಬೇಕು, ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಮತ್ತು ರಾಜ್ಯ ಸರ್ಕಾರ ಹಾಗೂ ವಿಪತ್ತು ನಿರ್ವಹಣಾ ಸಂಸ್ಥೆಗಳು ನೀಡಿರುವ ಸಲಹೆ, ಸೂಚನೆಗಳನ್ನು ಪಾಲಿಸಬೇಕೆಂದು ಅಧಿಕಾರಿಗಳು ಒತ್ತಾಯಿಸಿದ್ದಾರೆ.
ತಮಿಳುನಾಡಿನಲ್ಲಿ ಚಂಡಮಾರುತ ಸಂಬಂಧಿತ ಅವಘಡಗಳಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ಕೆ ಕೆ.ಎಸ್. ಎಸ್. ಆರ್. ರಾಮಚಂದ್ರನ್ ತಿಳಿಸಿದ್ದಾರೆ.
ವಿನಾಶಕಾರಿ ಚಂಡಮಾರುತದ ಹೊಡೆತಕ್ಕೆ ಶ್ರೀಲಂಕಾದಲ್ಲಿ 593 ಮಂದಿ ಮೃತಪಟ್ಟಿದ್ದಾರೆ.
ಈ ಮಧ್ಯೆ, ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಕ್ಕೆ ತುರ್ತು ನೆರವಿನ ಭಾಗವಾಗಿ ಭಾರತವು ‘ಆಪರೇಷನ್ ಸಾಗರ್ ಬಂಧು’ ಅಡಿಯಲ್ಲಿ ಶ್ರೀಲಂಕಾಕ್ಕೆ 53 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.