ADVERTISEMENT

ತೀವ್ರಗೊಂಡ ‘ಫೋನಿ’ ಚಂಡಮಾರುತ: ಭುವನೇಶ್ವರ ವಿಮಾನ ನಿಲ್ದಾಣ ಬಂದ್ 

​ಪ್ರಜಾವಾಣಿ ವಾರ್ತೆ
Published 3 ಮೇ 2019, 2:53 IST
Last Updated 3 ಮೇ 2019, 2:53 IST
   

ಭುವನೇಶ್ವರ/ನವದೆಹಲಿ:‘ಫೋನಿ’ ಚಂಡಮಾರುತ ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆಪುರಿ ಸಮೀಪದ ಕರಾವಳಿ ತೀರವನ್ನು ಪ್ರವೇಶಿಸಲಿದ್ದು ಮುಂಜಾಗ್ರತ ಕ್ರಮವಾಗಿ ಭುವನೇಶ್ವರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ.

‘ಫೋನಿ’ ಚಂಡಮಾರುತ ತೀವ್ರಗೊಳ್ಳುತ್ತಿರುವುದರಿಂದ ಒಡಿಶಾದ 15 ಜಿಲ್ಲೆಗಳ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ. ಇಲ್ಲಿಯವರೆಗೂ 8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣ ಕರಾವಳಿ ಪ್ರದೇಶದ ಸುತ್ತ ಮುತ್ತಲಿನ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ.

ADVERTISEMENT

ಶನಿವಾರ ಕೋಲ್ಕತ್ತ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಎಂದುವಿಶೇಷ ಪರಿಹಾರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಒಡಿಶಾದ ಕರಾವಳಿ ತೀರ ಪ್ರದೇಶಗಳಲ್ಲಿನಶಾಲೆ–ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ.

ಪುರಿ ಸಮೀಪದ ಕರಾವಳಿ ಪ್ರದೇಶವನ್ನು ‘ಫೋನಿ’ ಶುಕ್ರವಾರ ಪ್ರವೇಶಿಸಲಿದ್ದು, 18ರಿಂದ 200 ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಜತೆಗೆ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲೂ ಇದರ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತದಿಂದ ಬಾಧಿತವಾಗಿರುವ ಜನರಿಗೆ ಆಹಾರ ಒದಗಿಸಲು ಒಂದು ಲಕ್ಷ ಆಹಾರ ಪೊಟ್ಟಣಗಳನ್ನು ಸಿದ್ಧಪಡಿಸಲಾಗಿದೆ. ಇವುಗಳನ್ನು ಹೆಲಿಕಾಪ್ಟರ್‌ ಮೂಲಕ ತಲುಪಿಸಲು ಉದ್ದೇಶಿಸಲಾಗಿದೆ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.