ADVERTISEMENT

ಆಂಧ್ರದಲ್ಲಿ ‘ಮಿಚಾಂಗ್‌’ ಅಬ್ಬರ: ತಿರುಪತಿಯಲ್ಲಿ ಉಕ್ಕಿ ಹರಿಯುತ್ತಿರುವ 5 ನದಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2023, 8:16 IST
Last Updated 5 ಡಿಸೆಂಬರ್ 2023, 8:16 IST
<div class="paragraphs"><p>ಆಂಧ್ರಪ್ರದೇಶದಲ್ಲಿ ಮಳೆ</p></div>

ಆಂಧ್ರಪ್ರದೇಶದಲ್ಲಿ ಮಳೆ

   

–ಪಿಟಿಐ ಚಿತ್ರ

ಅಮರಾವತಿ: ‘ಮಿಚಾಂಗ್‌’ ಚಂಡಮಾರುತ ಇಂದು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದೆ. ಇದರ ವೇಗ ಗಂಟೆಗೆ 90–100 ಕಿ.ಮೀ ಇದ್ದು, ಕ್ರಮೇಣ 110 ಕಿ.ಮೀ.ಗೆ ಏರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ADVERTISEMENT

ನಿರಂತರ ಮಳೆಯಿಂದಾಗಿ ತಿರುಪತಿ ಜಿಲ್ಲಾ ಎಲ್ಲಾ 5 ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿರುವ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಹಂಚಿಕೊಂಡಿದೆ.

‘24 ಗಂಟೆಗಳ ಅವಧಿಯಲ್ಲಿ 200 ಮಿ.ಮೀವರೆಗೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಂಧ್ರದ ವಿವಿಧೆಡೆ ಸೋಮವಾರವೂ ಭಾರಿ ಮಳೆಯಾಗಿತ್ತು.

ಚಂಡಮಾರುತದ ಪರಿಣಾಮ ನೆಲ್ಲೂರು, ಮಚಲಿಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿ, ಕಾಕಿನಾಡ ಸೇರಿದಂತೆ ಹಲವು ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.

ಆಂಧ್ರ ಸಿಎಂ ವೈ. ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರು ತುರ್ತು ನಡೆಸಿದ್ದು, ಚಂಡಮಾರುತವನ್ನು ಎದುರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಗಂಟೆಗೆ 100–110 ಕಿ. ಮೀನಷ್ಟು ವೇಗದಲ್ಲಿ ಗಾಳಿ ಬೀಸಲಿದ್ದು, ಬಾಪಟ್ಲಾ ಜಿಲ್ಲೆಯಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಮುಖ್ಯಂಮತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ರೀತಿಯ ವಾತಾವರಣ ಡಿ.7ರವರೆಗೂ ಮುಂದುವರಿಯುವ ಸಾಧ್ಯತೆ ಇದೆ, ಬಳಿಕ ಚಂಡಮಾರುತ ದುರ್ಬಲವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.