ADVERTISEMENT

ಗುರುವಾರದಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಐಎಂಡಿ

ಪಿಟಿಐ
Published 7 ಡಿಸೆಂಬರ್ 2022, 13:58 IST
Last Updated 7 ಡಿಸೆಂಬರ್ 2022, 13:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಬುಧವಾರ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ರೂಪುಗೊಳ್ಳುವುದರಿಂದ ತಮಿಳುನಾಡು, ಪುದುಚೇರಿಯಲ್ಲಿ ಗುರುವಾರದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂದಾಜಿಸಿದೆ.

ಆಗ್ನೇಯ ಬಂಗಾಳಕೊಲ್ಲಿಯಲ್ಲಿ ನಿರ್ಮಾಣವಾಗಿದ್ದ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗಿ ಡಿ.8ರ ಬೆಳಿಗ್ಗೆ ವೇಳೆಗೆ ಉತ್ತರ ತಮಿಳುನಾಡು–ಪುದುಚೇರಿ ಮತ್ತು ಅದಕ್ಕೆ ಹೊಂದಿಕೊಂಡಂತಿರುವ ಆಂಧ್ರ ಪ್ರದೇಶದ ಕರಾವಳಿ ತಲುಪಲಿದೆ.

ಇದರಿಂದಾಗಿ ಡಿ.8ರಿಂದ 10ರವರೆಗೆ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್‌, ದಕ್ಷಿಣ ಆಂಧ್ರಪ್ರದೇಶ ಮತ್ತು ರಾಯಲಸೀಮೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.