ADVERTISEMENT

ದಾಭೋಲ್ಕರ್‌ ಹತ್ಯೆ: ಪೂರಕ ದೋಷಾರೋಪ ಪಟ್ಟಿ ಸಲ್ಲಿಕೆ

ಪಿಟಿಐ
Published 13 ಫೆಬ್ರುವರಿ 2019, 18:42 IST
Last Updated 13 ಫೆಬ್ರುವರಿ 2019, 18:42 IST
ದಾಭೋಲ್ಕರ್‌
ದಾಭೋಲ್ಕರ್‌   

ನವದೆಹಲಿ: ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿಗಳಾದ ಸಚಿನ್‌ ಅಂದುರೆ ಹಾಗೂ ಶರದ್‌ ಕಳಸ್ಕರ್ ವಿರುದ್ಧ ಪುಣೆಯ ಕೋರ್ಟ್‌ನಲ್ಲಿ ಸಿಬಿಐ ಬುಧವಾರ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಕ್ರಿಮಿನಲ್‌ ಪಿತೂರಿ, ಕೊಲೆ ಹಾಗೂ ಶಸ್ತ್ರಾಸ್ತ್ರಗಳ ಕಾಯ್ದೆಯಡಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್‌ ಹಾಗೂ ಆಯುಧಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT