ADVERTISEMENT

ದಾದ್ರಾ ಮತ್ತು ನಗರ ಹವೇಲಿ ವ್ಯಕ್ತಿಗೆ ಕೊರೊನಾ, ಮುಂಬೈ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 3:26 IST
Last Updated 6 ಏಪ್ರಿಲ್ 2020, 3:26 IST
ದಾದ್ರಾ ಮತ್ತು ನಗರ ಹವೇಲಿಯಲ್ಲಿ ಕೊರೊನಾ ಸೋಂಕು
ದಾದ್ರಾ ಮತ್ತು ನಗರ ಹವೇಲಿಯಲ್ಲಿ ಕೊರೊನಾ ಸೋಂಕು   

ದಾದ್ರಾ: ಕೇಂದ್ರಾಡಳಿತ ಪ್ರದೇಶ ದಾದ್ರಾ ಮತ್ತು ನಗರ್ ಹವೇಲಿಯ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂದೀಪ್ ಸಿಂಗ್ ತಿಳಿಸಿದ್ದಾರೆ.

ಭಾನುವಾರ ಈ ಸೋಂಕು ಕಾಣಿಸಿಕೊಂಡಿದ್ದು ಈತನ ಆರೋಗ್ಯ ಸ್ಥಿರವಾಗಿದೆ. ಈ ಕಾರಣದಿಂದಾಗಿ ಆತನ ಜೊತೆ ಸಂಪರ್ಕದಲ್ಲಿರುವ ಎಲ್ಲಾ ವ್ಯಕ್ತಿಗಳನ್ನು ಕ್ವಾರಂಟೈನ್‌‌ನಲ್ಲಿ ಇಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶೀತ, ನೆಗಡಿ ಕಾಣಿಸಿಕೊಂಡಿದ್ದ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಿದಾಗ ಈ ಸೋಂಕು ಕಾಣಿಸಿಕೊಂಡಿತ್ತು. ಕೂಡಲೆ ಎಚ್ಚೆತ್ತುಕೊಂಡ ಸ್ಥಳೀಯ ಸರ್ಕಾರ ಕೂಡಲೆ ಮುನ್ನೆಚ್ಚರಿಕೆ ವಹಿಸಿದ್ದುಆತನ ಸಂಪರ್ಕದಲ್ಲಿದ್ದ ಎಲ್ಲಾ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.